ಬಾಗಲಕೋಟೆ : ಬಾಗಲಕೋಟೆಯಲ್ಲಿ ಘೋರ ಘಟನೆ ನಡೆದಿದ್ದು, ರ‍್ಯಾಗಿಂಗ್ ಗೆ ಡೆತ್ ನೋಟ್ ಬರೆದು ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಅಂಜಲಿ ಮುಂಡಾಸ್ ಎನ್ನುವ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಸಹಪಾಠಿ ವರ್ಷ ಮತ್ತು ಪ್ರದೀಪ್ ನಿಂದ ಕಿರುಕುಳ ಆರೋಪ ಕೇಳಿ ಬಂದಿದ್ದು ಗುಳೇದಗುಡ್ಡದ ಬಂಡಾರಿ ಕಾಲೇಜ್ ವಿದ್ಯಾರ್ಥಿ ಅಂಜಲಿ ಮುಂಡಾಸ್ ಬಿಎ ಅಂತಿಮ ವರ್ಷದ ವಿದ್ಯಾರ್ಥಿನಿ ಆಗಿದ್ದಾಳೆ. ಡೆತ್ ನೋಟ್ ಅಲ್ಲಿ ನನ್ನನ್ನು ಮಾನಸಿಕವಾಗಿ ಇವರು ಕುಗ್ಗಿ ಸಿದ್ದಾರೆ. ಮತ್ತು ನನ್ನ ಬದುಕಿನ ಮಾರಕ ವ್ಯಕ್ತಿಗಳಾಗಿರುತ್ತಾರೆ. ಇವರನ್ನು ಸುಮ್ಮನೆ ಬಿಡಬಾರದು ಇವರೇ ಮೂವರು ನನ್ನ ಸಾವಿಗೆ ಕಾರಣರಾಗಿದ್ದಾರೆ ಎಂದು ವಿದ್ಯಾರ್ಥಿನಿ ಉಲ್ಲೇಖಿಸಿದ್ದಾಳೆ.