ಬೆಂಗಳೂರು : ಬೆಂಗಳೂರಲ್ಲಿ 4000 ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಆಹಾರ ನಿರೀಕ್ಷಕನೊಬ್ಬ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ FSSAI ಕಚೇರಿಯಲ್ಲಿ ನಡೆದಿದೆ.
ಭಾರತೀಯ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಪ್ರಾಧಿಕಾರ (FSSAI)ದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಲೆಕ್ಕ ನಿರೀಕ್ಷಕ ನಾಗೇಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಅಂಗಡಿಗೆ ಲೈಸೆನ್ಸ್ ನೀಡಲು 5,000 ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದ. ನಾಗೇಶ್ ಮಧ್ಯವರ್ತಿ ನಿರಂಜನ್ ಮೂಲಕ 4,000 ಲಂಚ ಸ್ವೀಕರಿಸಿದ್ದಾನೆ. ನೆಲಮಂಗಲದ FSSAI ಉಪಕಚೇರಿಯಲ್ಲಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಬಲೆಗೆ ಬಿದ್ದಿದ್ದಾನೆ.
ಆಹಾರ ನಿರೀಕ್ಷಕ ನಾಗೇಶ್ ಮತ್ತು ಮಧ್ಯವರ್ತಿ ನಿರಂಜನನ್ನು ಇದೀಗ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಲೋಕಾಯುಕ್ತ ಡಿವೈಎಸ್ಪಿ ನೇತೃತ್ವದಲ್ಲಿ ಈ ಒಂದು ಕಾರ್ಯಾಚರಣೆ ನಡೆದಿದೆ. ನೆಲಮಂಗಲದ ಎಫ್ ಎಸ್ ಎಸ್ ಎ ಐ ಉಪಕಚೇರಿಯಲ್ಲಿ ದಾಖಲೆಗಳನ್ನು ಸಹ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದರು.