ರಾಯಚೂರು : ರಾಯಚೂರಲ್ಲಿ ಘೋರ ದುರಂತ ಸಂಭವಿಸಿದ್ದು, ತಾಲೂಕಿನ ಮರ್ಚೆಡ್ ಗ್ರಾಮದಲ್ಲಿ ಸರ್ಕಾರಿ ಶಾಲೆಯ ಕೊಠಡಿಯೊಂದು ಹೊತ್ತಿ ಉರಿದಿದೆ. ಕಿಡಿಗೇಡಿಗಳು ಶಾಲೆಯ ಕೊಠಡಿಗೆ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ.
ಸರ್ಕಾರಿ ಶಾಲೆಯ LKG ಕ್ಲಾಸ್ ರೂಂ ಬೆಂಕಿಗೆ ಆಹುತಿಯಾಗಿದೆ. ಬೆಂಕಿಯ ಕೆನ್ನಾಲಿಗೆಗೆ ಕ್ಲಾಸ್ ರೂಂನಲ್ಲಿದ್ದ ಎಲ್ಲ ವಸ್ತುಗಳು ಸುಟ್ಟು ಭಸ್ಮವಾಗಿವೆ. ಪುಸ್ತಕಗಳು, ಚೇರ್, ಟೇಬಲ್, ಮಕ್ಕಳ ಆಟಿಕೆಗಳು ಸುಟ್ಟು ಭಸ್ಮವಾಗಿವೆ. ಸ್ಥಳಕ್ಕೆ ರಾಯಚೂರು ಗ್ರಾಮೀಣ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.