ಬಿಹಾರ್ : ಬಿಹಾರ ವಿಧಾನಸಭಾ ಚುನಾವಣೆಗೂ ಮೊದಲು, ಎನ್‌ಡಿಎ ಸರ್ಕಾರವು ಮಹಿಳೆಯರನ್ನು ಓಲೈಸಲು ಪ್ರಯತ್ನಿಸಿದೆ. ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಅವರ ಮೀಸಲಾತಿಯನ್ನು ಹೆಚ್ಚಿಸಿದೆ. ಬಿಹಾರ ವಿಧಾನಸಭಾ ಚುನಾವಣೆಗೂ ಮುನ್ನ ಮುಖ್ಯಮಂತ್ರಿ ನಿತೀಶ್ ಕುಮಾರ್ ಮಹಿಳೆಯರಿಗೆ ಭರ್ಜರಿ ಉಡುಗೊರೆ ನೀಡಿದ್ದು, ಸರ್ಕಾರಿ ನೌಕರಿಯಲ್ಲಿ ಮಹಿಳೆಯರಿಗೆ ಶೇಕಡ 35 ರಷ್ಟು ಮೀಸಲಾತಿ ಘೋಷಣೆ ಮಾಡಿದ್ದಾರೆ.
ಹೌದು ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಸರ್ಕಾರಿ ನೌಕರಿಯಲ್ಲಿರುವ ಮಹಿಳೆಯರಿಗೆ ಶೇಕಡ 35ರಷ್ಟು ಮೀಸಲಾತಿ ಘೋಷಣೆ ಮಾಡಿದ್ದಾರೆ. ಬಿಹಾರ ಚುನಾವಣೆಗೂ ಮುನ್ನ ಇದು ನಿತೀಶ್ ಸರ್ಕಾರದ ದೊಡ್ಡ ನಿರ್ಧಾರವಾಗಿದ್ದು, ಈಗ ಮಹಿಳೆಯರಿಗೆ ಸರ್ಕಾರಿ ಉದ್ಯೋಗಗಳಲ್ಲಿ ಶೇಕಡಾ 35 ರಷ್ಟು ಮೀಸಲಾತಿ ಸಿಗಲಿದೆ.