ಹಾಸನ : ಚಲಿಸುತ್ತಿದ್ದ ಬಸ್ ನಲ್ಲಿ ಏಕಾಏಕಿ ಭಾರಿ ಪ್ರಮಾಣದ ಹೊಗೆ ಕಾಣಿಸಿಕೊಂಡಿದ್ದು, ಎಸಿ ಟರ್ಬೋ ಗ್ಯಾಸ್ ಸೋರಿಕೆಯಾಗಿ ಬಸ್ ನಲ್ಲಿ ಭಾರಿ ಪ್ರಮಾಣದ ಹೊಗೆ ಕಾಣಿಸಿಕೊಂಡು ಕೆಲಕಾಲ ಆತಂಕ ಸೃಷ್ಟಿಯಾಗಿತ್ತು ಈ ವೇಳೆ ತಕ್ಷಣ ಚಾಲಕ ಸಮಯಪ್ರಜ್ಞೆ ಮೆರೆದು ಬಸ್ನಿಂದ ಪ್ರಯಾಣಿಕರನ್ನು ಕೆಳಗೆ ಇಳಿಸಿ ಭಾರಿ ಅನಾಹುತ ತಪ್ಪಿಸಿರುವ ಘಟನೆ ಹಾಸನದಲ್ಲಿ ನಡೆದಿದೆ.
ಹೌದು ಖಾಸಗಿ ಬಸ್ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಇದೀಗ ಭಾರಿ ಅನಾಹುತ ಒಂದು ತಪ್ಪಿದೆ. ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ ಘಾಟ್ ಬಳಿ ಮಾರನಹಳ್ಳಿ ಸಮೀಪ ಈ ಒಂದು ಘಟನೆ ನಡೆದಿದೆ. ಬಸ್ ನಲ್ಲಿ ಹೊಗೆ ಆವರಿಸುತ್ತಿದ್ದಂತೆ ಬಸ್ ಚಾಲಕ ತಕ್ಷಣ ಪ್ರಯಾಣಿಕರನ್ನು ಕೆಳಗಿಳಿಸಿದ್ದಾನೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮಾರನಹಳ್ಳಿ ಬಳಿ ಈ ಒಂದು ಘಟನೆ ಸಂಭವಿಸಿದೆ.
ಮಂಗಳೂರಿನಿಂದ ಬೆಂಗಳೂರು ಕಡೆಗೆ ಖಾಸಗಿ ಬಸ್ ಹೊರಟಿತ್ತು. ಶಿರಾಡಿ ಘಾಟ್ ಅಪ್ ನಲ್ಲಿ ಬಸ್ ಚಲಿಸುತ್ತಿದ್ದಾಗ ಏಕಾಏಕಿ ಭಾರಿ ಪ್ರಮಾಣದಲ್ಲಿ ಹೊಗೆ ಆವರಿಸಿದೆ. ಎಸಿ ಟರ್ಬೊ ಗ್ಯಾಸ್ ಸೋರಿಕೆಯಾಗಿ ಹೊಗೆ ಆವರಿಸಿದೆ. ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗೆ ಇಳಿಸಿದರಿಂದ ಭಾರಿ ಅನಾಹುತ ಒಂದು ತಪ್ಪಿದೆ. ಘಟನೆ ಕುರಿತಂತೆ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.