ಬಳ್ಳಾರಿ : ಬಳ್ಳಾರಿಯಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ರಾರವಿ ಗ್ರಾಮದಲ್ಲಿ ಸಿಡಿಲು ಬಡಿದು ಮೂವರು ಸಾವನಪ್ಪಿದ್ದಾರೆ. ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಇದೀಗ ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ರಾರಾವಿ ಗ್ರಾಮದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ.
ಮೃತರನ್ನು ಬೀರಪ್ಪ (45) ಸುನಿಲ್ (26) ಮತ್ತು ವಿನೋದ್ (14) ಎಂದು ತಿಳಿದು ಬಂದಿದೆ. ಕುರಿ ಮೇಯಿಸಲು ಹೋದಾಗ ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಇದೀಗ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮಳೆ ಬಂದಾಗ ಮೂವರು ಮರದ ಕೆಳಗೆ ನಿಂತಿದ್ದಾರೆ. ಈ ವೇಳೆ ಭಾರಿ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಘಟನೆ ಕುರಿತಂತೆ ಸಿರಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.