ತುಮಕೂರು : ತುಮಕೂರಿನಲ್ಲಿ ಘೋರವಾದ ದುರಂತ ಒಂದು ನಡೆದಿದ್ದು, ಮನೆಯ ಬಳಿ ಆಟವಾಡುತ್ತಿದ್ದ ಬಾಲಕಿಯ ಮೇಲೆ ಏಕಾಏಕಿ ಬೀದಿ ನಾಯಿಗಳು ದಾಳಿ ಮಾಡಿದ ಪರಿಣಾಮ 6 ವರ್ಷದ ಬಾಲಕಿ ಇದೀಗ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಅಯ್ಯನಬಾವಿ ಗ್ರಾಮದಲ್ಲಿ ನಡೆದಿದೆ.
ಹೌದು ಬೀದಿ ನಾಯಿಗಳ ದಾಳಿಯಿಂದ ನವ್ಯಾ (6) ಎಂಬ ಬಾಲಕಿ ಸಾವನಪ್ಪಿದ್ದಾಳೆ. ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಅಯ್ಯನಬಾವಿ ಗ್ರಾಮದಲ್ಲಿ ಈ ಒಂದು ದುರ್ಘಟನೆ ನಡೆದಿದೆ. ಮನೆಯ ಬಳಿ ಆಟವಾಡುತ್ತಿದ್ದಾಗ ಬೀದಿ ನಾಯಿಗಳು ಬಾಲಕಿಯ ಮೇಲೆ ಏಕಾಏಕಿ ದಾಳಿ ನಡೆಸಿವೆ.
ದಾಳಿಯ ವೇಳೆ ಬಾಲಕಿಯ ತಲೆ ಹಾಗೂ ಹೊಟ್ಟೆ ಭಾಗವನ್ನು ಕಚ್ಚಿ ಎಳೆದಾಡಿವೆ. ಬಾಲಕಿಯ ಮುಖ, ಕೈ, ಕಾಲು ಮತ್ತು ತೊಡೆ ಭಾಗವನ್ನು ಬೀದಿ ನಾಯಿಗಳು ಕಿತ್ತು ಹಾಕಿವೆ. ತಕ್ಷಣ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಜಿಲ್ಲಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಚಿಕಿತ್ಸೆ ಫಲಿಸದೆ ನವ್ಯ ಸಾವನ್ನಪಿದ್ದಾಳೆ. ಈ ಕುರಿತು ತಿಪಟೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆ ಕುರಿತು ಸ್ಥಳೀಯರು ಆಕ್ರೋಶ ಹೊರ ಹಾಕಿದ್ದಾರೆ.