ಬೆಂಗಳೂರು : ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ ನಲ್ಲಿದ್ದ ಇಬ್ಬರು ಸೇರಿ ನಾಲ್ವರು ಸ್ಥಳದಲ್ಲೇ ಸಾವವನ್ನಪ್ಪಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಗೊಟ್ಟಿಪುರ ಗೇಟ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಲಾರಿಗೆ ಡಿಕ್ಕಿ ಹೊಡೆದು ಆಂಧ್ರ ಸಾರಿಗೆ ಬಸ್ ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೇಶವರೆಡ್ಡಿ (44), ತುಳಸಿ (21), ಪ್ರಣತಿ (4), 1 ವರ್ಷದ ಮಗು
ಕೋಲಾರ-ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದ್ದು, ತಿರುಪತಿಯಿಂದ ಬೆಂಗಳೂರಿಗೆ ಬರುತ್ತಿದ್ದ ಆಂಧ್ರ ಸಾರಿಗೆ ಬಸ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಹೊಸಕೋಟೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.