ಬೆಳಗಾವಿ : ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುತ್ತಿದ್ದು ಮಳೆಯಿಂದಾಗಿ ಹಲವು ಅವಾಂತರಗಳು ಸೃಷ್ಟಿಯಾಗಿವೆ. ಇದೀಗ ಬೆಳಗಾವಿಯಲ್ಲಿ ನಿರಂತರ ಮಳೆಗೆ ಶಾಲಾ ಕಟ್ಟಡದ ಮೇಲೆ ಬೃಹತ್ ಗಾತ್ರದ ಮಾವಿನ ಮರ ಬಿದ್ದಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಘಡದಲ್ಲಿ ಈ ಒಂದು ಘಟನೆ ನಡೆದಿದೆ.
ಶಾಲೆ ಆರಂಭಕ್ಕೂ ಮುನ್ನ ಮರ ಬಿದ್ದಿದ್ದರಿಂದ ಭಾರಿ ಅನಾಹುತ ಒಂದು ತಪ್ಪಿದೆ. ಬೃಹತ್ ಗಾತ್ರದ ಮಾವಿನ ಮರ ಬಿದ್ದಿದ್ದರಿಂದ ಶಾಲೆಯ ಮೇಲ್ಚಾವಣಿ ಸಂಪೂರ್ಣವಾಗಿ ಹಾನಿಗೆ ಒಳಗಾಗಿದ್ದು, ಘಟನಾ ಸ್ಥಳಕ್ಕೆ ಅರಣ್ಯ ಮತ್ತು ಶಾಲಾ ಶಿಕ್ಷಣ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ಕುರಿತಂತೆ ನಂದಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.