ಬೆಂಗಳೂರು : ಬೆಂಗಳೂರಲ್ಲಿ ಮಳೆಯಿಂದಾಗಿ ಭಾರಿ ಅವಾಂತರ ಸೃಷ್ಟಿಯಾಗಿದ್ದು, ನಿನ್ನೆ ಸಂಜೆ 6:10ರ ಸುಮಾರಿಗೆ ಮಳೆ ಸಂದರ್ಭದಲ್ಲಿ ಬೆಂಗಳೂರಿನ ಶೇಷಾದ್ರಿಪುರಂ ಕಾನೂನು ಕಾಲೇಜು ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಮರವೊಂದು ಬಿದ್ದಿದೆ. ಮರ ಬಿದ್ದ ರಭಸಕ್ಕೆ 3 ವಿದ್ಯುತ್ ಕಂಬಗಳು ಧರಾಶಾಯಿಯಾಗಿವೆ.
ಆದ್ರೆ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಸ್ತೆಗೆ ಅಡ್ಡಲಾಗಿ ಬಿದ್ದಿರುವ ಮರವನ್ನ ಈವರೆಗೂ ಬಿಬಿಎಂಪಿ, ಬೆಸ್ಕಾಂ ಅಧಿಕಾರಿಗಳು ತೆರವು ಮಾಡಿಲ್ಲ ಎಂದು ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ ನಗರದ ಹಲವೆಡೆ ತಡರಾತ್ರಿ ಭಾರೀ ಮಳೆ ಸುರಿದು, ಪ್ರಮುಖ ರಸ್ತೆಯಲ್ಲಿ ನೀರು ತುಂಬಿಕೊಂಡು ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ವಿವಿಧ ಪ್ರದೇಶಗಳಲ್ಲಿ 3.2 ಸೆಂ.ಮೀ.ವರೆಗೂ ಮಳೆಯಾಗಿದೆ ಎಂದು ತಿಳಿದುಬಂದಿದೆ.
ಮಳೆಯೊಂದಿಗೆ ಭಾರೀ ಗಾಳಿಗೆ ಅಲ್ಲಲ್ಲಿ ಅವಾಂತರಗಳೂ ಸಂಭವಿಸಿವೆ. ಬೃಹತ್ ಮರಗಳು, ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ. ಈ ನಡುವೆ ನಿನ್ನೆ ರಾತ್ರಿ ಬಿದ್ದ ಮರಗಳನ್ನ ಈವರೆಗೂ ತೆರವು ಮಾಡದ ಬಿಬಿಎಂಪಿ, ಬೆಸ್ಕಾಂ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಇಡೀ ಶಾಪ ಹಾಕಿದ್ದಾರೆ.