ಬೆಂಗಳೂರು : ಬೆಂಗಳೂರಿನಲ್ಲಿ ಭೀಕರವಾದ ಕೊಲೆ ನಡೆದಿದ್ದು, ಪತಿಯೊಬ್ಬ ಮನೆಯಲ್ಲಿದ್ದ ಡಂಬಲ್ಸ್ ಗಳಿಂದ ರೂಂನಲ್ಲಿ ಮಲಗಿದ್ದ ಪತ್ನಿಯನ್ನು ಭೀಕರವಾಗಿ ಕೊಲೆಮಾಡಿ ಬಳಿಕ ಪತಿ ತಾನು ಕೂಡ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರದಲ್ಲಿ ನಡೆದಿದೆ.
ಕೊಲೆಯಾದ ಮಹಿಳೆಯನ್ನು ಸುಮಾ ಎಂದು ತಿಳಿದುಬಂದಿದ್ದು, ಸುಮಾಳನ್ನು ಕೊಲೆ ಮಾಡಿದ ಗಂಡ ಬಸವಚಾರಿ ಆತ್ಮಹತ್ಯೆಗೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ವಿಜಯಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲಾ ಹೆಚ್ಚುವರಿ ಎಸ್ ಪಿ ವೆಂಕಟೇಶ್ ಪ್ರಸನ್ನ ಹಾಗೂ ಡಿವೈಎಸ್ಪಿ ರವಿ ಭೇಟಿ ನೀಡಿ ಮಾಹಿತಿ ಪಡೆದರು.