ಮಂಗಳೂರು : ರಾಜ್ಯದಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ಕಾಸರಗೋಡಿನಿಂದ ಮಂಗಳೂರಿಗೆ ಬರುತ್ತಿದ್ದ KSRTC ಬಸ್ ಒಂದು ಹಿಂಮ್ಮುಖವಾಗಿ ಚಲಿಸಿದ ಪರಿಣಾಮ ಹಿಂದೆ ಇದ್ದ ಆಟೋದಲ್ಲಿನ ಒಂದೆ ಕುಟುಂಬದ 6 ಜನರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.
ಕಾಸರಗೋಡಿನಿಂದ ಹೊರಟಿದ್ದ ಬಸ್ (ನಂ. KA19F3407), ತಲಪಾಡಿ ಟೋಲ್‌ಗಿಂತ 150 ಮೀಟರ್ ಹಿಂದೆಯೇ ಅಪಘಾತವಾಗಿದೆ. ನಿಗಮದ ಚಾಲಕರು ತಮ್ಮ ವಾಹನವನ್ನು ಅತಿ ವೇಗವಾಗಿ ಚಾಲನೆ ಮಾಡಿಕೊಂಡು ಬರುವ ಸಮಯದಲ್ಲಿ ಏಕಾಏಕಿ ರಸ್ತೆಗೆ ಆಟೋವೊಂದು ಅಡ್ಡ ಬಂದಿದೆ. ಆಟೋಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ವಾಹನದ ಬ್ರೇಕ್ ಹಾಕಿದ್ದಾರೆ.
ಅಷ್ಟರಲ್ಲಿ ಬಸ್ ಆಟೋಗೆ ಹೊಡೆದಿದೆ. ಆ ಸಂದರ್ಭದಲ್ಲಿ ಬಸ್ ಡಿಕ್ಕಿಯಾಗಿ ಹಠಾತ್ತನೆ ಸ್ಜೀಡ್ ಆಗಿ ತಿರುಗಿದೆ. ಚಾಲಕರು ಚಾಲನಾ ಸೀಟಿನಿಂದ ಜಿಗಿದು ಎಸ್ಕೇಪ್ ಆಗಿದ್ದಾರೆ. ವಾಹನವು ಇಳಿಜಾರು ರಸ್ತೆಯಲ್ಲಿ ಹಿಮ್ಮುಖವಾಗಿ ಚಲಿಸಿ ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಅಟೋ ಮತ್ತು ಬಸ್ಸಿಗೆ ಕಾಯುತ್ತಿದ್ದ ಪ್ರಯಾಣಿಕರಿಗೆ ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ಮುಂದಿನಿಂದ ಡಿಕ್ಕಿ ಹೊಡೆದ ಆಟೋದಲ್ಲಿ ಇಬ್ಬರು ಪ್ರಯಾಣಿಕರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇನ್ನುಳಿದ ಆಟೋ ಚಾಲಕ ಸೇರಿ 4 ಜನ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರೂ ಮೃತಪಟ್ಟಿರುತ್ತಾರೆ. ಹಿಂಬದಿಯಿಂದ ಡಿಕ್ಕಿಯಾಗಿದ್ದ ಇಬ್ಬರು ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.