ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ನಲ್ಲಿ ಕೆಎಸ್ಆರ್ಟಿಸಿ ಬಸ್, 2 ಲಾರಿಗಳ ನಡುವೆ ಭೀಕರ ಅಪಘಾತ ಸಂಭಾವಿಸಿದೆ. ಅಪಘಾತದಲ್ಲಿ ಚಾಲಕನಿಗೆ ಗಂಭೀರವಾದ ಗಾಯಗಳಾಗಿವೆ.
KSRTC ಬಸ್ 2 ಚಿಕ್ಕಮಗಳೂರಿಂದ ಮಂಗಳೂರಿಗೆ ತೆರಳುತ್ತಿತ್ತು. ಈ ವೇಳೆ 2 ಲಾರಿಗಳ ನಡುವೆ ಅಪಘಾತ ಸಂಭವಿಸಿದ್ದು, ಬಸ್ ಚಾಲಕನಿಗೆ ಗಂಭೀರವಾದ ಗಾಯಗಳಾಗಿವೆ. ತಕ್ಷಣ ಮಂಗಳೂರು ಆಸ್ಪತ್ರೆಗೆ ಚಾಲಕನನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತ ಹಿನ್ನೆಲೆ ಚಾರ್ಮಾಡಿ ಘಾಟ್ ನಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.