ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಘೋರವಾದ ದುರಂತ ಸಂಭವಿಸಿದ್ದು, ಜಮೀನಿನಲ್ಲಿ ಕೃಷಿ ಕೆಲಸ ಮುಗಿಸಿಕೊಂಡು, ಕೃಷಿ ಹೊಂಡದಲ್ಲಿ ಕೈಕಾಲು ತೊಳೆಯುವಾಗ ಕಾಲು ಜಾರಿ ಬಿದ್ದು ಉಪನ್ಯಾಸಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚೇಳೂರು ತಾಲೂಕಿನ ವಂಗಿಮಳ್ಳು ಗ್ರಾಮದಲ್ಲಿ ಶನಿವಾರ ಸಂಜೆ ಘಟನೆ ನಡೆದಿದೆ.
ಮೃತರನ್ನು ಶಂಕರರೆಡ್ಡಿ (48) ಎಂದು ತಿಳಿದುಬಂದಿದೆ. ಮೃತ ಶಂಕರರೆಡ್ಡಿ ತಮ್ಮ ಜಮೀನಿನಲ್ಲಿ ಕೃಷಿ ಕೆಲಸಕ್ಕೆ ಹೋಗಿದ್ದರು. ಕೆಲಸ ಮುಗಿಸಿಕೊಂಡು ಮನೆಗೆ ಬರುವಾಗ ಜಮೀನು ಪಕ್ಕದ ಮಂಜುನಾಥ್ ರೆಡ್ಡಿಯವರ ಜಮೀನಿನಲ್ಲಿದ್ದ ಕೃಷಿ ಹೊಂಡದಲ್ಲಿ ಕೈಕಾಲು ತೊಳೆಯಲು ಹೋಗಿದ್ದಾರೆ.ಈ ವೇಳೆ ಅಲ್ಲಿನ ಪಾಚಿಯಿಂದಾಗಿ ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ. ಗ್ರಾಮದ ಉಪನ್ಯಾಸಕರಾಗಿದ್ದು, ಇದರ ಜೊತೆಯಲ್ಲಿ ಕೃಷಿ ಕೆಲಸ ಮಾಡುತ್ತಿದ್ದರು.