ಯಾದಗಿರಿ : ಯಾದಗಿರಿಯಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಕಾಲು ಜಾರಿ ಬಾವಿಗೆ ಬಿದ್ದು ಇಬ್ಬರು ಯುವತಿಯರು ಸಾವನಪ್ಪಿರುವ ಘಟನೆ ಯಾದಗಿರಿ ತಾಲೂಕಿನ ಮೋಟ್ನಳ್ಳಿ ಎಂಬ ಗ್ರಾಮದಲ್ಲಿ ನಡೆದಿದೆ.
ವೈಶಾಲಿ (17) ಮತ್ತು ನವೀತ (16) ಮೃತ ಯುವತಿಯರು ಎಂದು ತಿಳಿದುಬಂದಿದೆ. ಬಟ್ಟೆ ತೊಳೆಯುವಾಗ ಕಾಲು ಜಾರಿ ಬಾವಿಗೆ ಬಿದ್ದು ಇಬ್ಬರು ಯುವತಿಯರು ಸಾವನಪ್ಪಿದ್ದಾರೆ. ಯುವತಿಯರ ಮೃತದೇಹಗಳನ್ನು ಸ್ಥಳೀಯರು ಬಾವಿಯಿಂದ ಹೊರಗಡೆ ತೆಗೆದಿದ್ದಾರೆ. ಘಟನೆ ಕುರಿತಂತೆ ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.