ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯಲ್ಲಿ ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಮೊದಲ ಮಂಗನ ಕಾಯಿಲೆ ಪ್ರಕರಣ ಪತ್ತೆಯಾಗಿದೆ. ಸಿದ್ದಾಪುರ ಮೂಲದ ವ್ಯಕ್ತಿ ಹೊರಗೆ ಮಂಗನ ಕಾಯಿಲೆ ದೃಢಪಟ್ಟಿದೆ ಎಂದು ತಿಳಿದು ಬಂದಿದೆ.
ಸಿದ್ದಾಪುರದ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಮಂಗನ ಕಾಯಿಲೆ ಇರುವ ವ್ಯಕ್ತಿಗೆ ಚಿಕಿತ್ಸೆ ನೀಡಲಾಗುತ್ತಿದೆ.ಉತ್ತರ ಕನ್ನಡ ಜಿಲ್ಲೆಯಲ್ಲಿ ಎರಡು ವರ್ಷಗಳಿಂದ ಮಂಗನ ಕಾಯಿಲೆ ಇಳಿಕೆ ಕಂಡಿತ್ತು. ಜಿಲ್ಲೆಯಲ್ಲಿ ಇದೀಗ ಮತ್ತೆ ಮಂಗನ ಕಾಯಿಲೆ ಪತ್ತೆಯಾಗಿದೆ
ಕಳೆದ ಚಳಿಗಾಲದ ಅಧಿವೇಶನದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಈ ಕಾಯಿಲೆ ಕುರಿತು ಅಧಿವೇಶನದಲ್ಲಿ ಮಾತನಾಡಿ, ಮಲೆನಾಡಿನ ಜನರನ್ನು ಕಾಡುತ್ತಿರುವ ಕೆಎಫ್ಡಿ ಸಮಸ್ಯೆಯನ್ನು ಸರ್ಕಾರ ಗಂಭೀರ ಪರಿಗಣಿಸಿದೆ. ಹೀಗಾಗಿ, ಐಸಿಎಂಆರ್ ಜೊತೆ ಚರ್ಚೆ ನಡೆಸಿದ್ದು, ಹೊಸ ಲಸಿಕೆ ಸಂಶೋಧನೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
ಮಂಗನ ಕಾಯಿಲೆ ತಡೆಗೆ ನೀಡುತ್ತಿದ್ದ ಯಾವುದೇ ರೀತಿಯ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿರಲಿಲ್ಲ. ಹೀಗಾಗಿ, ಲಸಿಕೆ ವಿತರಣೆ ಸ್ಥಗಿತಗೊಳಿಸಲಾಗಿದೆ. ಖಾಸಗಿ ಕಂಪನಿಯ ಸಹಯೋಗದೊಂದಿಗೆ ಹೊಸ ಲಸಿಕೆ ಸಂಶೋಧನೆ ನಡೆಸಲಾಗುತ್ತಿದೆ ಎಂದು ಎಂದು ತಿಳಿಸಿದ್ದಾರೆ.
ಮಂಗನ ಕಾಯಿಲೆ ಅತೀ ಕಡಿಮೆ ಜನರಿಗೆ ಬಾಧಿಸುತ್ತಿರುವ ಕಾರಣದಿಂದ ಕಂಪನಿಗಳು ಲಸಿಕೆ ಕಂಡುಹಿಡಿಯಲು ಮುಂದಾಗುತ್ತಿಲ್ಲ. ಆದರೂ, ಸರ್ಕಾರ ಸಂಶೋಧನೆಗೆ ಧನ ಸಹಾಯ ನೀಡುವುದಾಗಿ ತಿಳಿಸಿದ್ದು, ಶೀಘ್ರವಾಗಿ ಹೊಸ ಲಸಿಕೆಯನ್ನು ರೋಗಿಗಳಿಗೆ ನೀಡಲಾಗುವುದು ಎಂದು ತಿಳಿಸಿದ್ದಾರೆ.