ಬೆಂಗಳೂರು : ಬೆಂಗಳೂರಿನಲ್ಲಿ ಕೈಯಲ್ಲಿ ಪಿಸ್ತೂಲ್ ಹಿಡಿದು ವ್ಯಕ್ತಿಯೊಬ್ಬ ಒಡಾಡುತ್ತಿರುವುದು ಕಂಡು ಬಂದಿದ್ದು, ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ.
ಬೆಂಗಳೂರಿನ ರಾಜಾಜಿನಗರದ ಜಾಮಿಟ್ರಿ ಪಬ್ ಗೆ ವ್ಯಕ್ತಿಯೊಬ್ಬ ಕೈಯಲ್ಲಿ ಪಿಸ್ತೂಲ್ ಹಿಡಿದು ಹೋಗಿದ್ದು, ಸ್ಥಳಕ್ಕೆ ಪೊಲೀಸರು D-SWAT ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸದ್ಯ ಪಬ್ ನಲ್ಲಿ ವ್ಯಕ್ತಿ ಅವಿತುಕುಳಿತಿದ್ದು, ಕಳ್ಳತನಕ್ಕೆ ಬಂದಿರುವ ಶಂಕೆ ವ್ಯಕ್ತವಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.