ಚಿಕ್ಕಮಗಳೂರು : ಚಿಕ್ಕಮಂಗಳೂರು ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಸುರಿಯುತ್ತಿದ್ದು, ಇದೀಗ ಬಿರುಗಾಳಿಗೆ ಬೃಹತ್ ಗಾತ್ರದ ಮರ ಬಿದ್ದು ಬೈಕ್ ಸವಾರನೋಬ್ಬ ಸಾವನ್ನಪ್ಪಿರುವ ಘಟನೆ ಚಿಕ್ಕಮಂಗಳೂರು ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ಯಳೇಕಲ್ ಗ್ರಾಮದ ಬಳಿ ನಡೆದಿದೆ.
ಮೃತ ವ್ಯಕ್ತಿಯನ್ನು ಕಡಬಗೆರೆ ಬಳಿಯ ಬಿಳುಕೊಪ್ಪ ಗ್ರಾಮದ ಅನಿಲ್ (53) ಎಂದು ಗುರುತಿಸಲಾಗಿದೆ. ಸದ್ಯ ಘಟನಾ ಸ್ಥಳಕ್ಕೆ ಬಾಳೆಹೊನ್ನೂರು ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.