ಉಡುಪಿ : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಇದೀಗ ಕರುಳಿನ ಕ್ಯಾನ್ಸರ್ನಿಂದ ಸಾವನ್ನಪ್ಪಿದ ವ್ಯಕ್ತಿ ಒಬ್ಬರಿಗೆ ಕೊರೋನಾ ಸೋಂಕು ದೃಢಪಟ್ಟಿರುವುದು ಬೆಳಕಿಗೆ ಬಂದಿದೆ.ಹೌದು ಕರುಳಿನ ಕ್ಯಾನ್ಸರ್ ಇಂದ ಮೃತಪಟ್ಟ ವ್ಯಕ್ತಿಗೆ ಕೊರೊನ ಸೋಂಕು ದೃಢಪಟ್ಟಿದೆ.
ಗ್ರಾಮದ ಪೀಟರ್ ಮಥಾಯಸ್ (65) ಎನ್ನುವವರಿಗೆ ಕೊರೊನ ಸೋಂಕು ದೃಢಪಟ್ಟಿದೆ. ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಬೆಳ್ಳೆ ಗ್ರಾಮದ ನಿವಾಸಿ ಪೀಟರ್ ಕರುಳಿನ ಕ್ಯಾನ್ಸರ್ ಮತ್ತು ಹೈಪರ್ ತೆನ್ಶನ್ ನಿಂದ ಕೊಳ್ಳುತ್ತಿದ್ದರು. ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡಿಸದೆ ಪೀಟರ್ ಸಾವನ್ನಪ್ಪಿದ್ದಾರೆ. ಮೃತಪಟ್ಟ ಪೀಟರ್ ಮಥಾಯಸ್ ಗೆ ಕರೋನಾ ಸೋಂಕು ದೃಢಪಟ್ಟಿದೆ.
ಈ ಕುರಿತು ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಸದ್ಯ ಪೀಟರ್ ಕುಟುಂಬ ಸದಸ್ಯರಿಗೆ ಯಾವುದೇ ರೋಗದ ಲಕ್ಷಣಗಳಿಲ್ಲ. ಕರೋನಾದಿಂದ ಪೀಟರ್ ಮೃತಪಟ್ಟಿದ್ದಾರೆ ಎಂದು ಪರಿಗಣಿಸುವುದಿಲ್ಲ. ಮೇ 29ರಂದು ಪೀಟರ್ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದರು.ಕಾಪು ತಹಶೀಲ್ದಾರ್ ಪ್ರತಿಭಾ ನೇತೃತ್ವದಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಈ ಕುರಿತು ಉಡುಪಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಮಾಹಿತಿ ನೀಡಿದರು.