ಮಂಡ್ಯ : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಯಾತ್ರಿಕ ಚಿರತೆ ದಾಳಿಗೆ ಬಲಿಯಾಗಿರುವ ಘಟನೆ ನಡೆದಿದೆ.ಪ್ರವೀಣ್ ನನ್ನು ಕೊಂದು ಚಿರತೆ ರಕ್ತ ಹೀರಿದೆ. ಕಾಡಿನೊಳ 1 ಕಿ.ಮೀ.ವರೆಗೆ ಗೆ ಎಳೆದೊಯ್ದಿದೆ.
ತಡರಾತ್ರಿ ಮಲೆ ಮಹದೇಶ್ವರ ಬೆಟ್ಟಕ್ಕೆ ಮಂಡ್ಯದ ಚೀರನಹಳ್ಳಿಯಿಂದ 5 ಮಂದಿ ಪಾದಯಾತ್ರೆ ಹೊರಟಿದ್ದರು. ಈ ವೇಳೆ ಪ್ರವೀಣ್ ಎನ್ನುವ ಯಾತ್ರಿಕ ಚಿರತೆ ದಾಳಿಗೆ ಬಲಿಯಾಗಿದ್ದಾರೆ. ಇದೀಗ ತಾಳಬೆಟ್ಟದ ಕಂಕದಲ್ಲಿ ಯಾತ್ರಿಕ ಪ್ರವೀಣ್ ಶವ ಪತ್ತೆಯಾಗಿದೆ.
ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ತೆರಳುವ ಸಂದರ್ಭದಲ್ಲಿ ರಸ್ತೆಯ ತಡೆಗೋಡೆ ಮೇಲೆ ಚಿರತೆ ಪ್ರತ್ಯಕ್ಷವಾಗಿದೆ. ಗಾಬರಿಯಿಂದ ಓಡಿ ಹೋಗುವಾಗ ಪ್ರವೀಣ್ ಚಿರತೆ ದಾಳಿಗೆ ಬಲಿಯಾಗಿದ್ದಾರೆ.








