ವಿಜಯಪುರ : ವಿಜಯಪುರದಲ್ಲಿ ಘೋರ ಘಟನೆಯೊಂದು ನಡೆದಿದ್ದು ಕಲುಷಿತ ನೀರು ಸೇವಿಸಿ 30ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ನಡುಗುಂದಿ ತಾಲೂಕಿನ ಬ್ಯಾಲಿಹಾಳ ಎಂಬ ಗ್ರಾಮದಲ್ಲಿ ನಡೆದಿದೆ.
ಹೌದು ಕಲುಷಿತ ನೀರು ಕುಡಿದು ಮೂವತ್ತಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ನಿಡಗುಂದಿ ತಾಲೂಕಿನ ಬ್ಯಾಲಿಹಾಳ ಗ್ರಾಮದಲ್ಲಿ ನಡೆದಿದೆ. ವಿಜಯಪುರ ಜಿಲ್ಲೆಯ ನಡುಗುಂದಿ ತಾಲೂಕಿನ ಗ್ರಾಮದಲ್ಲಿ ಕಳೆದ ಮೂರು ದಿನಗಳಿಂದ ಕಲುಷಿತ ನೀರು ಸೇವಿಸಿ 30ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ವರದಿಯಾಗಿದೆ.
ಹಾಗಾಗಿ ಕಳೆದ ಮೂರು ದಿನಗಳಿಂದ ವೈದ್ಯರ ತಂಡ ಗ್ರಾಮದಲ್ಲಿಯೇ ವಾಸ್ತವ್ಯ ಹೂಡಿದೆ ಗ್ರಾಮ ಪಂಚಾಯಿತಿಯಿಂದ ಪೂರೈಕೆ ಆದ ನೀರು ಕುಡಿದು ಗ್ರಾಮಸ್ಥರು ಅಸ್ವಸ್ಥಗೊಂಡಿದ್ದಾರೆ ಅಸ್ವಸ್ಥಗೊಂಡವರು ಬಸವನ ಬಾಗೇವಾಡಿ ಬಾಗಲಕೋಟೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತೀವ್ರ ಅಸ್ವಸ್ಥಗೊಂಡ ವ್ಯಕ್ತಿಯನ್ನು ಬೆಂಗಳೂರಿನ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.