ಚಾಮರಾಜನಗರ : ಚಾಮರಾಜನಗರ ಜಿಲ್ಲೆಯಲ್ಲಿ ಹುಲಿ ದಾಳಿಗೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡಿಪುರ ಅರಣ್ಯ ಪ್ರದೇಶದ ಓಂಕಾರ ಅರಣ್ಯದಲ್ಲಿ ಈ ಒಂದು ಘಟನೆ ನಡೆದಿದೆ.
ಹುಲಿ ದಾಳಿಗೆ ಪುಟ್ಟಮ (45) ಎನ್ನುವ ಮಹಿಳೆ ಬಲಿಯಾಗಿದ್ದಾರೆ. ಕುರಿ ಮೇಯಿಸಲು ತೆರಳಿದ ವೇಳೆ ದೇಶಿಪುರ ಕಾಲೋನಿಯ ಪುಟ್ಟಮ್ಮ ಬಲಿಯಾಗಿದ್ದಾರೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ದೇಶಿಪುರದ ಪುಟ್ಟಮ್ಮರನ್ನು ಹುಲಿ ಕೊಂದು ಸ್ವಲ್ಪದೂರು ಎಳೆದೊಯ್ದಿದೆ. ಘಟನಾ ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.