ದಕ್ಷಿಣಕನ್ನಡ : ದಕ್ಷಿಣ ಕನ್ನಡದಲ್ಲಿ ಇಂದು ಬಿಚ್ಚಿ ಬೀಳಿಸುವ ಘಟನೆ ನಡೆದಿದ್ದು, ಪತಿ ಪತ್ನಿಯ ಮೃತ ದೇಹ ಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪತಿಯೇ ಗರ್ಭಿಣಿ ಪತ್ನಿಯನ್ನು ಕೊಂದು ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕು ನಾವೂರು ಗ್ರಾಮದ ಬಡಗುಂಡಿ ಸಮೀಪ ನಡೆದಿದೆ.
ಮನೆಯೊಂದರಲ್ಲಿ ಸಜೀಪದ ತಿಮ್ಮಪ್ಪ ಮೂಲ್ಯ (52) ಹಾಗೂ ಅವರ ಗರ್ಭಿಣಿ ಪತ್ನಿ ಜಯಂತಿ (45) ಅವರ ಮೃತದೇಹಗಳು ಇಂದು ಪತ್ತೆಯಾಗಿದ್ದವು. ಆದರೆ ಯಾವುದೋ ವಿಷಯಕ್ಕೆ ಪತ್ನಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂಬ ಮೃತರ ಸಂಬಂಧಿಗಳ ದೂರಿನಂತೆ ಪ್ರಕರಣ ದಾಖಲಾಗಿದೆ.
ಜಯಂತಿ ಅವರ ಮೃತದೇಹ ಕೋಣೆಯಲ್ಲಿ ಮಲಗಿದ್ದ ಸ್ಥಿತಿಯಲ್ಲಿದ್ದರೆ, ತಿಮ್ಮಪ್ಪ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದರು. ಸಮೀಪದವರು ಬೆಳಗ್ಗೆಯಾದರೂ ಬಾಗಿಲು ತೆರೆಯಲಿಲ್ಲವೇಕೆ ಎಂದು ಸಂಶಯದಿಂದ ಗಮನಿಸಿದಾಗ ವಿಷಯ ಗೊತ್ತಾಗಿದ್ದು, ಅವರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಸಂಬಂಧಿಕರ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.