ಮಂಡ್ಯ : ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡುವ ವೇಳೆ ವ್ಯಕ್ತಿಯೊಬ್ಬ ನೀರು ಪಾಲಾಗಿರುವ ಘಟನೆ ಮದ್ದೂರು ತಾಲೂಕಿನ ಕಾರ್ಕಳ್ಳಿ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ.
ಮದ್ದೂರು ತಾಲೂಕಿನ ಸಿಎಂ ಕೆರೆ ಹೋಬಳಿಯ ಕಾರ್ಕಳ್ಳಿ ಗ್ರಾಮದ ರವಿಕುಮಾರ್ (40) ಎಂಬ ದುರ್ದೈವಿಯಾಗಿದ್ದಾನೆ. ಗೌರಿ – ಗಣೇಶ ಹಬ್ಬದ ಅಂಗವಾಗಿ ಕಾರ್ಕಳ್ಳಿ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗಿತ್ತು. ವಿಸರ್ಜನೆ ಅಂಗವಾಗಿ ಸೋಮವಾರ ಸಂಜೆ ಗ್ರಾಮದಲ್ಲಿ ಅದ್ದೂರಿಯಾಗಿ ಮೆರವಣಿಗೆ ಕೂಡ ನಡೆಸಲಾಗಿತ್ತು. ಮಧ್ಯರಾತ್ರಿ 1 ಗಂಟೆ ವೇಳೆಗೆ ಕ್ಯಾತಘಟ್ಟ ಗ್ರಾಮದ ಬಳಿಯ ಹೆಬ್ಬಾಳ ನಾಲೆಗೆ ವಿಸರ್ಜನೆ ಮಾಡಲು 20 ರಿಂದ 30 ಜನ ಆಗಮಿಸಿ ಪೂಜೆ ಸಲ್ಲಿಸಿ ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡಲು ನೀರಿಗೆ ಇಳಿದಿದ್ದಾರೆ.
ಆದರೆ, ನೀರಿನ ರಭಸಕ್ಕೆ ಬಸವರಾಜು ಎನ್ನುವವರು ಕೊಚ್ಚಿ ಹೋಗಿದ್ದಾನೆ. ತಕ್ಷಣವೇ ಸ್ಥಳೀಯರು ರಕ್ಷಣೆಗೆ ಮುಂದಾದರೂ ಸಹ ಯಾವುದೇ ಪ್ರಯೋಜನವಾಗಿಲ್ಲ. ಮಂಗಳವಾರ ಮುಂಜಾನೆಯಿಂದಲೇ ಕೆ.ಎಂ.ದೊಡ್ಡಿ ಪೋಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದು, ಇಲ್ಲಿಯವರೆಗೂ ಶವದ ಸಣ್ಣ ಸುಳಿವು ಸಹ ಪತ್ತೆಯಾಗಿಲ್ಲ. ಈ ಸಂಬಂಧ ಕೆ.ಎಂ.ದೊಡ್ಡಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.
ವರದಿ : ಗಿರೀಶ್ ರಾಜ್ ಮಂಡ್ಯ







![ಪೊಲೀಸ್ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ : ಒಂದು ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ದಾಳಿ ಯಾದಗಿರಿ ಲೋಕಾಯುಕ್ತ ದಾಳಿ ಇನ್ಸ್‌ಪೆಕ್ಟರ್ ಬಂಧನ [Yadgiri Lokayukta Raid Inspector Arrested], ಗುರುಮಠಕಲ್ ಪೊಲೀಸ್ ಭ್ರಷ್ಟಾಚಾರ ಪ್ರಕರಣ [Gurmitkal Police Corruption Case], ವೀರಣ್ಣ ದೊಡ್ಡಮನಿ ಲೋಕಾಯುಕ್ತ ಟ್ರ್ಯಾಪ್ [Veeranna Doddamani Lokayukta Trap]. ಟ್ಯಾಗ್ಸ್ (Tags)](https://kannadanewsnow.com/kannada/wp-content/uploads/2026/05/ಲಂಚ-ಪಡೆಯುವಾಗ-ಲೋಕಾಯುಕ್ತ-ಬಲೆಗೆ-ಬಿದ್ದ-ಗುರುಮಠಕಲ್-450x253.jpg)
