ಶಿವಮೊಗ್ಗ : ಶಿವಮೊಗ್ಗದಲ್ಲಿ ಘೋರವಾದ ಘಟನೆ ಒಂದು ನಡೆದಿದ್ದು, ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಮೂವರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಶಿವಮೊಗ್ಗದ ಶರಾವತಿ ನಗರದ ಎ ಬ್ಲಾಕ್ ನಲ್ಲಿರುವ ಮನೆಯಲ್ಲಿ ನಡೆದಿದೆ.
ಗಾಯಾಳುಗಳನ್ನು ಮಹಮ್ಮದ್ ಪೀರ್, ಶಾಹಿರಾ ಬಾನು ಸೊಸೆ ಜಬೀರ್ ಗಂಭೀರವಾದ ಗಾಯಗಳಾಗಿದ್ದು, ತಕ್ಷಣ ಮೂವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಮೊಹಮ್ಮದ್ ಪೀರ್ ಸ್ಥಿತಿ ಗಂಭೀರವಾಗಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ಕುರಿತಂತೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.