ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ದುರಂತ ಸಂಭವಿಸಿದ್ದು ಮೈಸೂರಿನಿಂದ ಬೆಂಗಳೂರಿಗೆ ಚಲಿಸುತ್ತಿದ್ದ ಉದಯಪುರ ಎಕ್ಸ್ಪ್ರೆಸ್ ರೈಲಿನ ಇಂಜಿನ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಎಚ್ಚೆತ್ತುಕೊಂಡ ಸಿಬ್ಬಂದಿಗಳು ರೈಲನ್ನು ನಿಲ್ಲಿಸಿ ಬೆಂಕಿ ನಂದಿಸಿರುವ ಘಟನೆ ಬೆಂಗಳೂರಿನ ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನಲ್ಲಿ ನಡೆದಿದೆ.
ಹೌದು ಚಲಿಸುತ್ತಿದ್ದ ರೈಲಿನ ಇಂಜಿನ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ವಂದಾರಗುಪ್ಪೆ ಬಳಿ ರೈಲು ನಿಲ್ಲಿಸಿ ಸಿಬ್ಬಂದಿಗಳು ಕೂಡಲೇ ಬೆಂಕಿ ನಂದಿಸಿದ್ದಾರೆ. ಬೆಂಗಳೂರಿಗೆ ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ವಂದಾರಗುಪ್ಪೆ ಗ್ರಾಮದಲ್ಲಿ ಒಂದು ಘಟನೆ ನಡೆದಿದ್ದು, ಉದಯಪುರ ಎಕ್ಸ್ಪ್ರೆಸ್ ರೈಲಿನ ಇಂಜಿನ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಮೈಸೂರಿನಿಂದ ಬೆಂಗಳೂರಿಗೆ ಈ ಒಂದು ಎಕ್ಸ್ಪ್ರೆಸ್ ರೈಲು ತೆರಳುತಿತ್ತು. ಸದ್ಯ ಭಾರಿ ಅನಾಹುತ ಒಂದು ತಪ್ಪಿದೆ.