ಶಿವಮೊಗ್ಗ : ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಭೀಕರವಾದ ಅಪಘಾತ ಸಂಭವಿಸಿದ್ದು, ಕೆಎಸ್ಆರ್ಟಿಸಿ ಬಸ್ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹೊಂಬಾಳು ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ.
ಹೌದು ಕೆಎಸ್ಆರ್ಟಿಸಿ ಬಸ್ ಮತ್ತು ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದಿದ್ದು, ಈ ವೇಳೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ 30ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡ ಪ್ರಯಾಣಿಕರಿಗೆ ಕೂಡಲೇ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ಕುರಿತು ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.