ಶಿವಮೊಗ್ಗ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸಾಗರದಲ್ಲಿ ಟಿಟಿ ವಾಹನ ಪಲ್ಟಿಯಾಗಿ ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.
ಸಾಗರದ ಬಳಿಯ ಆವಿನಹಳ್ಳಿ ಹತ್ತಿರ ಬೀಕರ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಹಲವರು ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಗಾಯಾಳುಗಳು ಸಾಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಶಾಸಕರಾದ ಬೇಳೂರು ಗೋಪಾಲಕೃಷ್ಣ ಆಸ್ಪತ್ರೆಗೆ ದೌಡಾಯಿಸಿದ್ದು, ತುರ್ತು ಚಿಕಿತ್ಸೆಗೆ ಮತ್ತು ಶಿವಮೊಗ್ಗಕ್ಕೆ ಗಾಯಾಳುಗಳನ್ನು ಕಳುಹಿಸಲು ನೆರವಾಗಿದ್ದಾರೆ.