ಶಿವಮೊಗ್ಗ : ಶಿವಮೊಗ್ಗದಲ್ಲಿ ನೇಣು ಹಾಕಿಕೊಂಡು ಮೆಡಿಕಲ್ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿದ್ದಾಳೆ. ನೇಣಿಗೆ ಶರಣಾಗಿರುವ ಮೆಡಿಕಲ್ ವಿದ್ಯಾರ್ಥಿಯನ್ನು ವಿಷ್ಣುಪ್ರಿಯ (22) ಎಂದು ತಿಳಿದುಬಂದಿದೆ. ಶಿವಮೊಗ್ಗದ ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿಷ್ಣುಪ್ರಿಯ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದಳು.
ಹಾಸ್ಟೆಲ್ನಲ್ಲಿ ಬೆಂಗಳೂರು ಮೂಲದ ವಿಷ್ಣುಪ್ರಿಯ ಇದೀಗ ನೇಣಿಗೆ ಶರಣಾಗಿದ್ದಾಳೆ. ವಿದ್ಯಾರ್ಥಿನಿ ವಿಷ್ಣುಪ್ರಿಯ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಆದರೆ ಇಂಟರ್ನಶಿಪ್ ಮುಗಿಯಲು 10 ದಿನಗಳು ಮಾತ್ರ ಬಾಕಿ ಉಳಿದಿತ್ತು. ಮೃತ ವಿದ್ಯಾರ್ಥಿನಿಯ ಪೋಷಕರು ಬರ್ಲಿನ್ ನಲ್ಲಿ ಇದ್ದಾರೆ. ಶಿವಮೊಗ್ಗದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.