ಗಳೂರು : ಮಂಗಳೂರಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಮಂಗಳೂರಿನ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಅಮೆಜಾನ್ ಸುಗಂಧ ದ್ರವ್ಯ ಫ್ಯಾಕ್ಟರಿ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಬೆಳಿಗ್ಗೆ 5 ಗಂಟೆ ಸುಮಾರಿಗೆ ಈ ಒಂದು ಅಗ್ನಿ ಅವಘಡ ಸಂಭವಿಸಿದ್ದು ಮುಗಿಲತ್ತರಕ್ಕೆ ಬೆಂಕಿ ಹಬ್ಬಿದೆ.
ಅಮೆಜಾನ್ ಸುಗಂಧ ದ್ರವ್ಯ ಕಾರ್ಖಾನೆಗೆ ಬೆಳಗಿನ ಜಾವ 5 ಗಂಟೆಗೆ ಅಗ್ನಿ ಅವಘಡ ಸಂಭವಿಸಿದೆ. ತಾಂತ್ರಿಕ ಸಮಸ್ಯೆಯಿಂದ ಈ ಒಂದು ಅಗ್ನಿ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ತಕ್ಷಣ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ, ಬೆಂಕಿ ನಂದಿಸುವ ಕಾರ್ಯ ನಡೆಸಿದರು. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ತಿಳಿದುಬಂದಿದೆ.