ಬೆಳಗಾವಿ : ವಸತಿ ಶಾಲೆಯಲ್ಲಿ ಉಪಹಾರ ಸೇವಿಸಿದ 30ಕ್ಕೂ ಹೆಚ್ಚು ಜನರು ಅಸ್ವಸ್ಥ ಆಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಹಿರೇಕೋಡಿ ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಈ ಒಂದು ಘಟನೆ ನಡೆದಿದೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದ್ದು, ಸದ್ಯ ಇಬ್ಬರು ವಿದ್ಯಾರ್ಥಿಗಳಿಗೆ ICU ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಸತಿ ಶಾಲೆಯಲ್ಲಿ ಬೆಳಗ್ಗೆ ವಿದ್ಯಾರ್ಥಿಗಳು ಉಪ್ಪಿಟ್ಟು ಸೇವಿಸಿದ್ದಾರೆ. 400ಕ್ಕೂ ಹೆಚ್ಚು ವಿದ್ಯಾರ್ಥಿಗಳಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ 6ನೇ ತರಗತಿಯಿಂದ ಪಿಯುಸಿವರೆಗೆ ವಿದ್ಯಾರ್ಥಿಗಳು ಓದುತ್ತಿದ್ದಾರೆ. ಉಪ್ಪಿಟ್ಟು ಸೇವನೆ ನಂತರ ಹಲವು ಮಕ್ಕಳಿಗೆ ಹೊಟ್ಟೆ ನೋವು, ವಾಂತಿ, ಭೇದಿ ಆಗಿದ್ದು ಅಸ್ವಸ್ಥರನ್ನು ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.