ರಾಯಚೂರು : ರಾಯಚೂರಿನಲ್ಲಿ ಇಂದು ಘೋರವಾದ ದುರಂತ ಒಂದು ಸಂಭವಿಸಿದ್ದು ಕಲುಷಿತ ನೀರು ಸೇವಿಸಿ 30ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ವರದಿಯಾಗಿದೆ. ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಭೂತಲದಿನ್ನಿ ಎಂಬ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ.
ಕಲುಷಿತ ನೀರು ಸೇವಿಸಿ 30ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಟ್ಯಾಂಕರ್ ನಿಂದ ಪೂರಿಕೈಯಾದ ನೀರು ಕುಡಿದು 30 ಜನರು ಅಸ್ವಸ್ಥರಾಗಿದ್ದಾರೆ. ವಾಂತಿ, ಭೇದಿಯಿಂದ 25ಕ್ಕೂ ಹೆಚ್ಚು ಆಸ್ಪತ್ರೆಗೆ ದಾಖಲಾಗಿದ್ದಾರೆ. ಟ್ಯಾಂಕರ್ ಅನ್ನು ಸ್ವಚ್ಛಗೊಳಿಸದೆ ನೀರು ಪೂರೈಕೆ ಮಾಡಿರುವ ಆರೋಪ ಇದೀಗ ಕೇಳಿಬರುತ್ತಿದೆ. ಗ್ರಾಮ ಪಂಚಾಯಿತಿ ವಿರುದ್ಧ ಗ್ರಾಮಸ್ಥರು ಇದೀಗ ಆಕ್ರೋಶ ಹೊರಹಾಕುತ್ತಿದ್ದಾರೆ. ಭೂತಲದಿನ್ನಿ ನಿವಾಸಿಗಳ ಆರೋಗ್ಯವನ್ನು ಇದೀಗ ವೈದ್ಯರು ತಪಾಸಣೆ ನಡೆಸಿದ್ದಾರೆ.