ಚೆನ್ನೈ : ಬೆಳ್ಳಂಬೆಳಗ್ಗೆ ತಮಿಳುನಾಡಿನಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಶಾಲಾ ವಾಹನ ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.
ಇಂದು ಬೆಳಗ್ಗೆ ಬೆಳಿಗ್ಗೆ ತಮಿಳುನಾಡಿನ ಕಡಲೂರು ಬಳಿಯ ಸೆಮ್ಮಂಕುಪ್ಪಂನಲ್ಲಿ ನಡೆದ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಶಾಲಾ ವ್ಯಾನ್ ರೈಲು ಹಳಿ ದಾಟಲು ಪ್ರಯತ್ನಿಸುತ್ತಿದ್ದಾಗ ಹಾದುಹೋಗುತ್ತಿದ್ದ ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದೆ.
ಗಾಯಗೊಂಡ ವಿದ್ಯಾರ್ಥಿಗಳನ್ನು ಚಿಕಿತ್ಸೆಗಾಗಿ ಕಡಲೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡ ವಿದ್ಯಾರ್ಥಿಗಳ ನಿಖರ ಸಂಖ್ಯೆ ಇನ್ನೂ ದೃಢಪಟ್ಟಿಲ್ಲ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ.