ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಘೋರ ದುರಂತವೊಂದು ಸಂಭವಿಸಿದ್ದು, ಚಿಕ್ಕಬಳ್ಳಾಪುರದಲ್ಲಿ ಚಲಿಸುತ್ತಿದ್ದ ಬೊಲೆರೋ ವಾಹನದ ಮೇಲೆ ಬೃಹತ್ ಕಂಟೈನರ್ ಪಲ್ಟಿಯಾದ ಪರಿಣಾಮ ಹಲವರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ದೊಡ್ಡಪೈಲಗುರ್ಕಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಈ ಘಟನೆ ನಡೆದಿದೆ.ಅತಿ ವೇಗವಾಗಿ ಬಂದ ಕಂಟೈನರ್ ಲಾರಿ ನಿಯಂತ್ರಣ ತಪ್ಪಿ ಪಕ್ಕದಲ್ಲೇ ಚಲಿಸುತ್ತಿದ್ದ ಬೊಲೆರೋ ವಾಹನದ ಮೇಲೆ ಉರುಳಿ ಬಿದ್ದ ಪರಿಣಾಮ ಕಂಟೈನರ್ ಭಾರಕ್ಕೆ ಬೊಲೆರೋ ವಾಹನವು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ.
ವರದಿಗಳ ಪ್ರಕಾರ, ವಾಹನದಲ್ಲಿದ್ದ ಹಲವರು ಒಳಗೆ ಸಿಲುಕಿರುವ ಆತಂಕ ವ್ಯಕ್ತವಾಗಿದೆ.ಸ್ಥಳಕ್ಕೆ ಪೊಲೀಸರು ಮತ್ತು ಅಗ್ನಿಶಾಮಕ ದಳ ಧಾವಿಸಿದ್ದು, ಎರಡು ಬೃಹತ್ ಕ್ರೇನ್ ಗಳ ಸಹಾಯದಿಂದ ಕಂಟೈನರ್ ಅನ್ನು ಎತ್ತುವ ಪ್ರಯತ್ನ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.








