ಮಂಡ್ಯ : ರಾಜ್ಯದಲ್ಲಿ ಮಹಾಶಿವರಾತ್ರಿ ದಿನದಂದೇ ಮತ್ತೊಂದು ಘೋರ ದುರಂತ ಸಂಭವಿಸಿದ್ದು, ಕೆಮಿಕಲ್ ಟ್ಯಾಂಕ್ ಸ್ಪೋಟಗೊಂಡು ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.
ಮಂಡ್ಯದ ಬಸರಾಳು ಸಮೀಪದ ಕಾರೆಕಟ್ಟೆ ಗ್ರಾಮದ ಬಳಿಯ ಕೀರ್ತಿ ಕೆಮಿಕಲ್ ಕಾರ್ಖಾನೆಯಲ್ಲಿ ಕೆಮಿಕಲ್ ಟ್ಯಾಂಕ್ ಸ್ಪೋಟಗೊಂಡು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ.
ಕಾರೆಕಟ್ಟೆಯಿಂದ ಬೇರೆ ಕಡೆಗೆ ಕಾರ್ಖಾನೆ ಶಿಫ್ಟ್ ಮಾಡಲಾಗುತ್ತಿತ್ತು. ಬಿಹಾರ ಮೂಲದ ಕಾರ್ಮಿಕರು ಕಾರ್ಖಾನೆ ಸ್ಥಳಾಂತರ ಮಾಡುತ್ತಿದ್ದರು. ಇಂದು ರಾಸಾಯನಿಕ ಟ್ಯಾಂಕ್ ತೆರವು ಮಾಡುತ್ತಿದ್ದ ವೇಳೆ ಕೆಮಿಕಲ್ ಟ್ಯಾಂಕ್ ಸ್ಪೋಟಗೊಂಡು ಬಿಹಾರ ಮೂಲದ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು, ಮತ್ತಿಬ್ಬರು ಕಾರ್ಮಿಕರು ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 4 ವರ್ಷದ ಹಿಂದೆ ಇದೇ ಕಾರ್ಖಾನೆಯಿಂದ ರಾಸಾಯನಿಕ ಸೋರಿಕೆಯಾಗಿತ್ತು. ಬಳಿಕ ಕಾರ್ಖಾನೆ ಆರಂಭಕ್ಕೆ ತೀವ್ರ ವಿರೋಧ ವ್ಯಕ್ತವಾಗಿ, ಹಾನಿಯಾದ ಬೆಳೆಗೆ ಮಂಡ್ಯ ಜಿಲ್ಲಾಡಳಿತ ಪರಿಹಾರ ನೀಡಿತ್ತು. ಹೀಗಾಗಿ ಸದ್ಯ ಬೇರೆಡೆ ಕಾರ್ಖಾನೆ ಸ್ಥಳಾಂತರ ಮಾಡುತ್ತಿತ್ತು. ಬಸರಾಳು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.








