ದಿಯೋಘರ್ : ಜಾರ್ಖಂಡ್ ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬಸ್ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ 18 ಕನ್ವಾರಿಯಾ ಯಾತ್ರಿಗಳು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ.
ಗಾಯಾಳುಗಳಲ್ಲಿ ಹಲವರ ಸ್ಥಿತಿ ಗಂಭೀರವಾಗಿರುವುದರಿಂದ ಸಾವುನೋವುಗಳ ಸಂಖ್ಯೆ ಹೆಚ್ಚಾಗಬಹುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೋಹನಪುರ ಪೊಲೀಸ್ ಠಾಣೆ ವ್ಯಾಪ್ತಿಯ ಜಮುನಿಯಾ ಅರಣ್ಯ ಪ್ರದೇಶದ ಬಳಿ ಕನ್ವಾರಿಯಾಗಳನ್ನು ಸಾಗಿಸುತ್ತಿದ್ದ ಬಸ್, ಗ್ಯಾಸ್ ಸಿಲಿಂಡರ್ ತುಂಬಿದ್ದ ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಐವರು ಕವಾರಿಯಾಗಳು ಸಾವನ್ನಪ್ಪಿದ್ದಾರೆ.
ದಿಯೋಘರ್ ನ ಮೋಹನಪುರ ಪೊಲೀಸ್ ಠಾಣೆಯ ಜಮುನಿಯಾ ಅರಣ್ಯದ ಬಳಿ ಕನ್ವಾರಿಯಾಗಳನ್ನು ಸಾಗಿಸುತ್ತಿದ್ದ 32 ಆಸನಗಳ ಬಸ್ ಗ್ಯಾಸ್ ಸಿಲಿಂಡರ್ ತುಂಬಿದ್ದ ಟ್ರಕ್ಗೆ ಡಿಕ್ಕಿ ಹೊಡೆದು ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.
Deoghar, Jharkhand | Five Kavariyas died in a road accident as their bus collided with a truck. Several others were injured. More details awaited: SK Sinha, Zonal IG, Santhal Pargana
— ANI (@ANI) July 29, 2025
मेरे लोकसभा के देवघर में श्रावण मास में कांवर यात्रा के दौरान बस और ट्रक के दुर्घटनाग्रस्त होने के कारण 18 श्रद्धालुओं की मौत हो गई है । बाबा बैद्यनाथ जी उनके परिजनों को दुख सहने की शक्ति प्रदान करें
— Dr Nishikant Dubey (@nishikant_dubey) July 29, 2025