ಆಗ್ರಾ : ಫಿರೋಜಾಬಾದ್ ಜಿಲ್ಲೆಯ ಆಗ್ರಾ-ಲಕ್ನೋ ಎಕ್ಸ್ಪ್ರೆಸ್ ವೇ ನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಿಂತಿದ್ದ ವಾಹನಕ್ಕೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ.
UP: 5 died, several injured after bus collides with parked vehicle on Agra-Lucknow Expressway
Read @ANI Story | https://t.co/WpZWVzsJiE#UttarPradesh #BusAccident #AgraLucknowExpressway pic.twitter.com/YipJBxeS5t
— ANI Digital (@ani_digital) November 9, 2024
ಮಥುರಾದಿಂದ ಲಕ್ನೋಗೆ ತೆರಳುತ್ತಿದ್ದ ಬಸ್ ಆಗ್ರಾ-ಲಕ್ನೋ ಎಕ್ಸ್ಪ್ರೆಸ್ವೇಯ ಥಾನಾ ನಾಸಿರ್ಪುರ ಬಳಿ ನಿಲ್ಲಿಸಿದ್ದ ವಾಹನಕ್ಕೆ ಡಿಕ್ಕಿ ಹೊಡೆದಿದೆ ಎಂದು ಗ್ರಾಮೀಣ ಫಿರೋಜಾಬಾದ್ ಎಸ್ಪಿ ಅಖಿಲೇಶ್ ಭಡೋರಿಯಾ ತಿಳಿಸಿದ್ದಾರೆ. ಘಟನೆಯಲ್ಲಿ 5 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಗಾಯಗೊಂಡಿದ್ದಾರೆ.
ಮಾಹಿತಿ ಪಡೆದ ಕೂಡಲೇ ಪೊಲೀಸರು ಸ್ಥಳಕ್ಕೆ ತಲುಪಿದರು. ಸ್ಥಳಕ್ಕೆ ಗ್ರಾಮೀಣ ಎಸ್ಪಿ ಮತ್ತು ಸಿಒ ಸಿರ್ಸಾಗಂಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಗಾಯಾಳುಗಳನ್ನು ತಕ್ಷಣ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕನ ಅಜಾಗರೂಕತೆಯಿಂದ ಬಸ್ ನಿಯಂತ್ರಣ ಕಳೆದುಕೊಂಡಿರುವುದು ತನಿಖೆಯಿಂದ ತಿಳಿದುಬಂದಿದೆ ಎಂದು ಎಸ್ಪಿ ತಿಳಿಸಿದ್ದಾರೆ.