ಬೆಳಗಾವಿ : ಬೆಳಗಾವಿಯಲ್ಲಿ ಹಾಸ್ಟೆಲ್ ನಲ್ಲಿ ನರ್ಸಿಂಗ್ ವಿದ್ಯಾರ್ಥಿನಿ ಓರ್ವಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿಯ ಸದಾಶಿವನಗರದ ವಸತಿ ನಿಲಯದಲ್ಲಿ ಈ ಒಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಬೆಳಿಗ್ಗೆ ಕೊಡಡಿಯಲ್ಲಿ ಸುಮಿತ್ರಾ ಗೋಕಾಕ್ (19) ನೇಣಿಗೆ ಶರಣಾದ ನರ್ಸಿಂಗ್ ವಿದ್ಯಾರ್ಥಿನಿ ಎಂದು ತಿಳಿದು ಬಂದಿದೆ. ಸಹಪಾಠಿ ಬಂದು ಬಾಗಿಲು ಬಡಿದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.