ಹಾವೇರಿ : ಹಾವೇರಿಯಲ್ಲಿ ಘೋರವಾದ ದುರಂತ ಸಂಭವಿಸಿದ್ದು, ಕೆರೆಯಲ್ಲಿ ಈಜಲು ತೆರಳಿದ್ದಂತ ಇಬ್ಬರು ಯುವಕರು ನೀರಲ್ಲಿ ಮುಳುಗಿ ಧಾರುಣವಾಗಿ ಸಾವನ್ನಪ್ಪಿರುವಂತ ಘಟನೆ ಹಾವೇರಿಯ ಚಿಕ್ಕಂಶಿಯಲ್ಲಿ ನಡೆದಿದೆ.
ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಚಿಕ್ಕಂಶಿ ಹೊಸೂರು ಗ್ರಾಮದ ಕೆರೆಗೆ ಈಜೋದಕ್ಕೆ ಮಾಲತೇಶ್ ಕುರುಬರ(19) ಹಾಗೂ ಬಸವರಾಜ್(38) ತೆರಳಿದ್ದರು.ಇಬ್ಬರು ಕೆರೆಯ ಕೆಸಲಿನಲ್ಲಿ ಸಿಲುಕಿಕೊಂಡು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಅಗ್ನಿಶಾಮಕ ಸಿಬ್ಬಂದಿ ಮಾಲತೇಶ್ ಕುರುಬರ ಶವವನ್ನು ಹೊರ ತೆಗೆದಿದ್ದಾರೆ. ಬಸವರಾಜ್ ಶವಕ್ಕಾಗಿ ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಈ ಸಂಬಂಧ ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








