ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಘೋರವಾದಂತಹ ದುರಂತ ಒಂದು ಸಂಭವಿಸಿದ್ದು ಪೈಪ್ಲೈನ್ ಕಾಮಗಾರಿ ವೇಳೆ ಮಣ್ಣು ಕುಸಿದು ಓರ್ವ ಕಾರ್ಮಿಕ ಸಾವನ್ನಪ್ಪಿದ್ದು ಮತ್ತು ಅವರ ಸಿಟಿ ಗಂಭೀರವಾಗಿರುವ ಘಟನೆ ಹುಬ್ಬಳ್ಳಿಯ ಅರಳಿಕಟ್ಟಿ ಓಣಿಯಲ್ಲಿ ನಡೆದಿದೆ.
ಹೌದು ಪೈಪ್ ಲೈನ್ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕ ಸಾವನಪ್ಪಿದ್ದಾರೆ. ಹುಬ್ಬಳ್ಳಿಯ ಅರಳಿಕಟ್ಟಿ ಓಣಿಯಲ್ಲಿ ಚೇತನ್ ಜಾಧವ (35) ಎನ್ನುವವರು ಸಾವನ್ನಪ್ಪಿದ್ದಾರೆ. ಹುಬ್ಬಳ್ಳಿಯ ಉಣಕಲ್ ನಿವಾಸಿ ಚೇತನ್ ಜಾಧವ್ ಮೃತ ದುರ್ದವಿ ಎಂದು ತಿಳಿದು ಬಂದಿದೆ.
ಹುಬ್ಬಳ್ಳಿ ಧಾರವಾಡ ಪಾಲಿಕೆ ವ್ಯಾಪ್ತಿಯಲ್ಲಿ ಕಾಮಗಾರಿ ನಡೆಯುತ್ತಿದೆ. ಕಾಮಗಾರಿ ಗುತ್ತಿಗೆಯನ್ನು L&T ಕಂಪನಿ ಗುತ್ತಿಗೆ ಪಡೆದಿದ್ದು, ಅದರ ನಿರ್ಲಕ್ಷದಿಂದ ದುರಂತ ಸಂಭವಿಸಿದೆ. ಮುಂಜಾಗ್ರತ ಕ್ರಮ ಕೈಗೊಳ್ಳದೆ ಕಾಮಗಾರಿ ನಡೆಸುತ್ತಿದೆ ಎಂದು ಕಂಪನಿಯ ವಿರುದ್ಧ ಆರೋಪ ಕೇಳಿ ಬಂದಿದೆ.