ಕೋಲಾರ : ಕೋಲಾರದಲ್ಲಿ ಘೋರ ದುರಂತವೊಂದು ನಡೆದಿದ್ದು, ಬ್ಯಾಟರಾಯನಹಳ್ಳಿ ಬಳಿ ರೈಲಿಗೆ ತಡೆಕೊಟ್ಟು ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಬ್ಯಾಟರಾಯನ ಹಳ್ಳಿಯಲ್ಲಿ ಈ ಒಂದು ಘಟನೆ ನಡೆದಿದೆ.
ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡವರನ್ನ ಸತೀಶ್ (18) ಹಾಗೂ ಶ್ವೇತ (17) ಆತ್ಮಹತ್ಯೆಗೆ ಶರಣಾದವರ ಎಂದು ತಿಳಿದುಬಂದಿದೆ. ಬ್ಯಾಟರಾಯನಹಳ್ಳಿ ಬಳಿ ಬೈಕ್ ನಿಲ್ಲಿಸಿ ಇಬ್ಬರು ಹೋಗಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಘಟನೆ ಕುರಿತು ಕಂಟ್ರೋನ್ಮೆಂಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.