ಮಂಡ್ಯ : ಮಂಡ್ಯದಲ್ಲಿ ಮತ್ತೊಂದು ಘೋರವಾದ ದುರಂತ ಸಂಭವಿಸಿದ್ದು ವಿ ಸಿ ನಾಲಿಗೆ ನಿಯಂತ್ರಣ ಕಳೆದುಕೊಂಡ ಬೈಕ್ ಬಿದಪರಿಣಾಮ ಬೈಕ್ ನಲ್ಲಿ ಚಲಿಸುತ್ತಿದ್ದ ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಹೊಸಗಾವಿ ಗ್ರಾಮದಲ್ಲಿ ನಡೆದಿದೆ.
ಹೌದು ಹೊಸಗಾವಿ ಬಳಿ ವಿಸಿ ನಾಲೆಗೆ ಬೈಕ್ ಉರುಳಿ ಬಿದ್ದು ಈ ಒಂದು ದುರಂತ ಸಂಭವಿಸಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಹೊಸಗಾವಿ ಗ್ರಾಮದಲ್ಲಿ ನಿಯಂತ್ರಣ ಕಳೆದುಕೊಂಡ ಬೈಕ್ ವಿಸಿ ನಾಲೆಗೆ ಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರನ್ನು ತುಮಕೂರು ಮೂಲದ ರಾಮಣ್ಣ (70) ಮತ್ತು ಮದ್ದೂರಿನ ಸೋಮಹಳ್ಳಿ ಗ್ರಾಮದ ಭರತ್ (19) ಎಂದು ತಿಳಿದು ಬಂದಿದೆ. ತಡೆಗೋಡೆಗೆ ಡಿಕ್ಕಿ ಹೊಡೆದು ಬೈಕ್ ನಾಲೆಗೆ ಬಿದ್ದಿದೆ. ಮದ್ದೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.