ಮಂಗಳೂರು : ಮಂಗಳೂರಲ್ಲಿ ಘೋರ ಘಟನೆಯೊಂದು ನಡೆದಿದ್ದು, MRPL ನಲ್ಲಿ ವಿಷ ಅನಿಲ ಸೋರಿಕೆಯಾಗಿ ಇಬ್ಬರು ಸಿಬ್ಬಂದಿಗಳು ಸಾವನ್ನಪ್ಪಿರುವ ಘಟನೆ ಮಂಗಳೂರು ಹೊರವಲಯದ ಸೂರತ್ಕಲ್ ನ ಎಂ ಆರ್ ಪಿ ಎಲ್ ಘಟಕದಲ್ಲಿ ಈ ಒಂದು ಘಟನೆ ನಡೆದಿದೆ.
ದೀಪಚಂದ್ರ ಭಾರ್ತೀಯಾ, ಬಿಜಿಲ್ ಪ್ರಸಾದ್ ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ. ತೈಲ ಶುಧೀಕರಣ ಘಟಕದ ಮೂವ್ಮೆಂಟ್ ವಿಭಾಗದಲ್ಲಿ ಒಂದು ಘಟನೆ ನಡೆದಿದೆ. ದೋಷ ಕಂಡು ಬಂದ ಹಿನ್ನೆಲೆಯಲ್ಲಿ ಪರಿಶೀಲನೆಗೆ ತೆರಳಿದ್ದ ಇಬ್ಬರು ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ. MRPL ನ ಒಎಂಎಸ್ (ಆಯಿಲ್ ಮೂಮೆಂಟ್ ಸರ್ವಿಸ್) ನಲ್ಲಿ ಈ ಘಟನೆ ನಡೆದಿದೆ. ಎಂಎಂಎಸ್ ವಿಭಾಗದ ಟ್ಯಾಂಕ್ ಮೇಲ್ಚಾವಣಿಗೆ ತೆರಳಿದ್ದಾಗ ಇಬ್ಬರು ಸಿಬ್ಬಂದಿಗಳು ಅಸ್ವಸ್ಥರಾಗಿದ್ದಾರೆ.
ತಕ್ಷಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ದಿದ್ದರೂ ಕೂಡ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಅಸ್ವಸ್ಥರ ರಕ್ಷಣೆಗೆ ಮುಂದಾಗಿದ್ದ ವಿನಾಯಕ ಮೈಗೇರಿ ಎನ್ನುವವರ ಸ್ಥಿತಿ ಕೂಡ ಗಂಭೀರವಾಗಿದೆ. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸದ್ಯ ವಿನಾಯಕ ಗೆ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ಬಗ್ಗೆ ತನಿಖೆಗೆ ಎಂಆರ್‌ಪಿಎಲ್ ಆಡಳಿತ ಮಂಡಳಿ ಸಮಿತಿ ರಚನೆ ಮಾಡಿದೆ. ಗ್ರೂಪ್ ಜನರಲ್ ಮ್ಯಾನೇಜರ್ ಒಳಗೊಂಡ ಉನ್ನತ ಮಟ್ಟದ ಸಮಿತಿ ರಚನೆ ಮಾಡಿದೆ.