ಮೈಸೂರು : ಮೈಸೂರಲ್ಲಿ ಘೋರವಾದ ದುರಂತ ನಡೆದಿದ್ದು, ಕೆಆರ್‌ಎಸ್ ಹಿನ್ನೀರಿನಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳು ನೀರು ಪಾಲಾಗಿರುವ ಘಟನೆ ಇಂದು ನಡೆದಿದೆ. ಮೈಸೂರು ತಾಲೂಕಿನ ಮೀನಾಕ್ಷಿಪುರ ಬಳಿ ನೀರಿನಲ್ಲಿ ಮೂವರು ವಿದ್ಯಾರ್ಥಿಗಳು ನೀರು ಪಾಲಾಗಿದ್ದಾರೆ.
ಮಂಡ್ಯದ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ನಿರುಪಾಲಾಗಿದ್ದಾರೆ ಎಂದು ತಿಳಿದುಬಂದಿದೆ. ಪ್ರವಾಸಕ್ಕೆ ಬಂದಿದ್ದ ಪ್ರಶಾಂತ್, ಸಿದ್ಧ ಮತ್ತು ಕೃಷ್ಣ ಎನ್ನುವ ಮೂವರು ವಿದ್ಯಾರ್ಥಿಗಳು ನೀರು ಪಾಲಾಗಿದ್ದಾರೆ, ಘಟನಾ ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿಗಳು ಬಂದು ಮೂವರು ವಿದ್ಯಾರ್ಥಿಗಳಿಗಾಗಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಘಟನೆ ಕುರಿತಂತೆ ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.