ತುಮಕೂರು : ತುಮಕೂರಿನಲ್ಲಿ ಇಂದು ಘೋರವಾದ ದುರಂತ ಒಂದು ಸಂಭವಿಸಿದ್ದು, ಮನೆಯ ಬಳಿ ಆಟವಾಡುತ್ತಿದ್ದಾಗ ವಿದ್ಯುತ್ ಹರಿದು 13 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ನಡೆದಿದೆ.
ಮೃತ ಬಾಲಕನನ್ನು ಅಚ್ಚುತ್ ಕುಮಾರ್ (13) ಎಂದು ತಿಳಿದುಬಂದಿದೆ. ಅಚ್ಯುತ್ ಕುಮಾರ್ ಮನೆಯ ಬಳಿ ಆಟವಾಡುತ್ತಿದ್ದ. ಈ ವೇಳೆ ಕಂಬದಿಂದ ಮನೆಗೆ ಸಂಪರ್ಕ ಕಲ್ಪಿಸಿದ್ದ ವಿದ್ಯುತ್ ವೈರ್ ನಿಂದ ಈ ಒಂದು ಅವಘಡ ಸಂಭವಿಸಿದೆ. ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.