ಬೆಂಗಳೂರು : ಬೆಂಗಳೂರು ಮಹಾನಗರ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವರುಣ ಅಬ್ಬರಿಸುತ್ತಿದ್ದು, ಈಗಾಗಲೇ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಿಂದಾಗಿ ಗುಡ್ಡ ಕುಸಿತ ಹಾಗೂ ಭೂಕುಸಿತ ಘಟನೆಗಳು ನಡೆದಿದೆ.ಇಂದು ಬೆಂಗಳೂರಿನಲ್ಲಿ ಭಾರಿ ಮಳೆಯಿಂದಾಗಿ ಮರ ಬಿದ್ದು ಬೈಕ್ ಸವಾರನಿಗೆ ಗಂಭೀರವಾದ ಗಾಯಗಳಾಗಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಬಿಎಂಪಿ ಹಾಗು ಅರಣ್ಯ ಇಲಾಖೆಯ ಮೇಲೆ FIR ದಾಖಲಾಗಿದೆ.
ಹೌದು ಬೆಂಗಳೂರಿನಲ್ಲಿ ಮರ ಬಿದ್ದು ಬೈಕ್ ಸವಾರನಿಗೆ ಗಂಭಿರವಾಗಿ ಗಾಯವಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬಿಬಿಎಂಪಿ ಹಾಗೂ ಅರಣ್ಯ ಇಲಾಖೆಯ ಮೇಲೆ ಇದೀಗ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಜಯನಗರ ಪೊಲೀಸ್ ಠಾಣೆಯಲ್ಲಿ ಬಿಬಿಎಂಪಿ ಹಾಗು ಅರಣ್ಯ ಇಲಾಖೆಯ ಮೇಲೆ FIR ದಾಖಲು ಮಾಡಲಾಗಿದೆ.