ಕೊಡಗು : ಕೊಡಗು ಜಿಲ್ಲೆಯಲ್ಲಿ ಮಳೆಯಿಂದಾಗಿ ಹಲವು ಕಡೆ ಅವಾಂತರ ಸೃಷ್ಟಿಯಾಗಿದ್ದು, ಮಳೆಯಿಂದ ಅಂಗನವಾಡಿ ಕಟ್ಟಡದ ಮೇಲೆ ಬೃಹತ್ ಗಾತ್ರದ ಮರ ಬಿದ್ದು ಅವಾಂತರ ಆಗಿ ಅಂಗನವಾಡಿ ಸಹಾಯಕಿ ಬೇಬಿ (45) ಎನ್ನುವವರಿಗೆ ಗಂಭೀರವಾದ ಗಾಯಗಳಾಗಿರುವೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಗರ್ವಾಲಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ.
ಸದ್ಯ ಬೇಬಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಅದೃಷ್ಟವಶಾತ್ ಅನಾಹುತದಿಂದ 14 ಅಂಗನವಾಡಿ ಮಕ್ಕಳು ಪಾರಾಗಿದ್ದಾರೆ. ವ್ಯಾಕ್ಸಿನ್ಗಾಗಿ ಮಕ್ಕಳು ಸಮೀಪದ ಪಂಚಾಯಿತಿಗೆ ತೆರಳಿದ್ದರು. ಈ ವೇಳೆ ಅಂಗನವಾಡ ಕಟ್ಟಡದ ಮೇಲೆ ಮರ ಬಿದ್ದು ಅವಘಡ ಸಂಭವಿಸಿದೆ. ಮರ ತೆರವುಗೊಳಿಸುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಹಲವು ಬಾರಿ ಮನವಿ ಮಾಡಿದ್ದರು ಆದರೂ ಕೂಡ ಇಲಾಖೆ ನಿರ್ಲಕ್ಷ ವಹಿಸಿದೆ ಎಂದು ಅರಣ್ಯ ಇಲಾಖೆಯ ವಿರುದ್ಧ ಘರ್ವಾಲೆ ಗ್ರಾಮಸ್ಥರು ಆರೋಪಿಸಿದ್ದಾರೆ