ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಗುಟ್ಟಹಳ್ಳಿ ಗೆಟ್ ಬಳಿ ನಡೆದಿದೆ.
ಲಾರಿ ಹರಿದು ಅನಿತಾ (28) ಎನ್ನುವ ಮಹಿಳೆ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಗುಟ್ಟಹಳ್ಳಿಯಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ಮೃತ ಅನಿತಾ ಪೂಜೆನ ಅಗ್ರಹಾರದ ನಿವಾಸಿ ಎಂದು ತಿಳಿದುಬಂದಿದೆ. ಅಪಘಾತದ ನಂತರ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ತಿರುಮಲಶೆಟ್ಟಿ ಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಸರಣಿ ಅಪಘಾತದಲ್ಲಿ 9 ಕಾರುಗಳು ಜಖಂ!
ಇನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹೊರ ವಲಯದ ಚಿಕ್ಕಸಣ್ಣ ಗೇಟ್ ಬಳಿ ಸರಣಿ ಅಪಘಾತದಿಂದ 9 ಕಾರುಗಳು ಜಖಂಗೊಂಡಿವೆ. ಸಿಗ್ನಲ್ ನಲ್ಲಿ ನಿಂತಿದ್ದ ಕಾರುಗಳಿಗೆ ಹಿಂಬದಿಯಿಂದ ವೇಗವಾಗಿ ಬಂದಂತಹ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ 9 ಕಾರುಗಳು ಜಖಂ ಗೊಂಡಿವೆ. ಅದೃಷ್ಟವಶಾತ್ 9 ಕಾರುಗಳಿದ್ದ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.