ಕಲಬುರ್ಗಿ : ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ಅದೇ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಮುಸ್ಲಿಂ ಯುವತಿಗೆ ಬೈಕ್ ನಲ್ಲಿ ಡ್ರಾಪ್ ನೀಡಿದ್ದಕ್ಕೆ ಮುಸ್ಲಿಂ ಯುವಕರು ಡ್ರಾಪ್ ಕೊಟ್ಟ ಯುವಕನ ಮೇಲೆ ನೈತಿಕ ಪೊಲೀಸ್ ಗಿರಿ ನಡೆಸಿ ಹಲ್ಲೆ ಮಾಡಿರುವ ಘಟನೆ ಕಲ್ಬುರ್ಗಿಯಲ್ಲಿ ಜೂನ್ 26ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಹೌದು ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿರುವ ಬೈಲಪ್ಪ, ಅದೇ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿರುವ ಅನ್ಯಕೋಮಿನ ಯುವತಿಗೆ ತಮ್ಮ ಬೈಕ್ನಲ್ಲಿ ಡ್ರಾಪ್ ನೀಡಿದ್ದಾರೆ. ಈ ವೇಳೆ ಬೈಕ್ ಅಡ್ಡಗಟ್ಟಿ ಕಿಡಗೇಡಿಗಳು ತಮ್ಮ ಸಮುದಾಯದ ಯವತಿಯನ್ನು ಬೈಕ್ ಮೇಲೆ ಡ್ರಾಪ್ ಮಾಡಿದ್ದಕ್ಕೆ ಹಲ್ಲೆ ಮಾಡಿದ್ದಾರೆ. ಎಂ.ಬಿ.ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣ ದಾಖಲಿಸಿಕೊಂಡ ಬಳಿಕ ಸದ್ಯ ನಗರದ ಎಂ.ಬಿ.ನಗರ ಠಾಣೆ ಪೊಲೀಸರು ಆರು ಜನರನ್ನು ಬಂಧಿಸಿದ್ದಾರೆ. ಮೊಹಮ್ಮದ್ ಸಲ್ಮಾನ್, ಮೊಹಮ್ಮದ್ ಆದಿಲ್, ಮೊಹಮ್ಮದ್ ರೆಹಾನ್, ಮೊಹಮ್ಮದ್ ಉಜೈರ್, ಮೊಹಮ್ಮದ್ ಫೈಜ್, ಮೊಹಮ್ಮದ್ ಆಸಿಫ್ ಬಂಧಿತರು ಎಂದು ತಿಳಿದುಬಂದಿದೆ.