ಚಿಕ್ಕಮಗಳೂರು : ರಾಜ್ಯದಲ್ಲಿ ಮತ್ತೊಂದು ಘೋರ ಘಟನೆಯೊಂದು ಬೆಳಕಿಗೆ ಬಂದಿದ್ದು, ಪ್ರಿಯತಮೆಯನ್ನು ಕೊಂದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ದಾಸರಹಳ್ಳಿಯಲ್ಲಿ ನಡೆದಿದೆ.
ಚಿಕ್ಕಮಗಳೂರು ತಾಲೂಕಿನ ಪೂರ್ಣಿಮಾ ಎಂಬ ಯುವತಿಯನ್ನು ಕೊಂದು ಬಳಿಕ ಭದ್ರಾವತಿಯ ಮಧು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕಾಫಿ ತೋಟದ ರಸ್ತೆಯಲ್ಲಿ ಕಾರಿನಲ್ಲಿ ಪೂರ್ಣಿಮ ಶವ ಪತ್ತೆಯಾಗಿದ್ದು, ಕಾಫಿ ತೋಟದ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಧು ಶವ ಪತ್ತೆಯಾಗಿದೆ.
ಸದ್ಯ ಚಿಕ್ಕಮಗಳೂರು ಆಸ್ಪತ್ರೆಯ ಶವಗಾರಕ್ಕೆ ಮೃತದೇಹಗಳನ್ನು ರವಾನಿಸಲಾಗಿದೆ. ಸ್ಥಳಕ್ಕೆ ಚಿಕ್ಕಮಗಳೂರು ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.